News Karnataka Kannada
Monday, May 06 2024
ಬೆಂಗಳೂರು

ಅಮರನಾಥ ಭೂಕುಸಿತ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ ರವಾನೆ

amarnath-yatra
Photo Credit : News Kannada

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿಕೊಂಡು ಸಂಕಷ್ಟದಲ್ಲಿದ್ದಾರೆ. ಈ ಪೈಕಿ, 23 ಯಾತ್ರಾರ್ಥಿಗಳು ಗದಗ ಜಿಲ್ಲೆಯವರು.

ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ.  ಯಾತ್ರಾರ್ಥಿಗಳು ಅಲ್ಲಿಂದಲೇ ಪ್ರಧಾನಿ ನರೇಂದ್ರ ಮೋದಿ​ಯವ​ರಿಗೆ ವಿಡಿಯೋ ಕಳಿಸಿದ್ದು, ‘ನಮ್ಮನ್ನು ರಕ್ಷಣೆ ಮಾಡಿ, ನಮ್ಮ ತವ​ರೂರಿಗೆ ಸುರ​ಕ್ಷಿ​ತ​ವಾಗಿ ತೆರ​ಳಲು ಅನು​ಕೂಲ ಮಾಡಿ​ಕೊಡಿ’ ಎಂದು ಮನವಿ ಮಾಡಿ​​ದ್ದಾ​ರೆ. ಜುಲೈ 4ರಂದು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಂದ ಇವರೆಲ್ಲಾ ಅಮರನಾಥಕ್ಕೆ ತೆರಳಿದ್ದರು.

ಅಮರನಾಥ ದರ್ಶನ ಪಡೆದು ಶುಕ್ರವಾರ ವಾಪಸ್‌ ಆಗುವ ವೇಳೆ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಮಾರ್ಗ ಮಧ್ಯೆ ಇವರು ಸಿಲುಕಿಕೊಂಡಿದ್ದಾರೆ. ಯಾತ್ರಾರ್ಥಿಗಳು ಸದ್ಯ ಬೇಸ್‌ ಕ್ಯಾಂಪ್‌ನಲ್ಲಿ ಆಶ್ರಯ ಪಡೆದು ಸುರ​ಕ್ಷಿ​ತ​ವಾ​ಗಿ​ದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಕಂದಾಯ ಇಲಾಖೆಯ ಐಎಎಸ್ ಅಧಿಕಾರಿ ರಶ್ಮಿ ಅವರು ಕರ್ನಾಟಕದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಹೆಲಿಕಾಪ್ಟರ್ ಮತ್ತು ವಿಮಾನದ ಮೂಲಕ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಬೆಟ್ಟ ಗುಡ್ಡಗಳ ಕಡಿದಾದ, ದುರ್ಗಮ ಪ್ರದೇಶದಲ್ಲಿ ಯಾತ್ರಿಕರು ಸಿಲುಕಿದ್ದು, ಮಳೆ ಕಡಿಮೆಯಾದ ಬಳಿಕ ರಕ್ಷಣಾ ಕಾರ್ಯ ನಡೆಸಲಾಗುತ್ತದೆ. ಉತ್ತರಕಾಂಡ ರೀಜನಲ್ ಕಮಿಷನ್, ಜಿಲ್ಲಾಧಿಕಾರಿಗಳ ಜೊತೆ, ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಹೇಳಿದ್ದರು. ಯಾತ್ರಿಗಳ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಸೇಫ್ ಆಗಿದ್ದಾರೆ ಊಟ, ಉಪಹಾರ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರದಿಂದ ಈಗಾಗಲೇ ರಕ್ಷಣಾ ತಂಡ ರವಾನಿಸಲಾಗಿದೆ. ಕೂಡಲೇ ಅಲ್ಲಿಂದ ರಕ್ಷಣೆ ಮಾಡಲಾಗುತ್ತೆ ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು