Bengaluru 22°C
Ad

ಭಾರತಕ್ಕೆ ಅಕ್ರಮ ಒಳನುಸುಳುವಿಕೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಅಕ್ರಮವಾಗಿ ಭಾರತಕ್ಕೆ ನುಸುಳಿ ಬಂದು ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಕೇಸ್ ನ ಪ್ರಮುಖ ಆರೋಪಿ ಪರ್ವೇಜ್‌ನನ್ನು ಜಿಗಣಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 

ಬೆಂಗಳೂರು: ಅಕ್ರಮವಾಗಿ ಭಾರತಕ್ಕೆ ನುಸುಳಿ ಬಂದು ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಕೇಸ್ ನ ಪ್ರಮುಖ ಆರೋಪಿ ಪರ್ವೇಜ್‌ನನ್ನು ಜಿಗಣಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಈ ಪ್ರಕರಣದಲ್ಲಿ ಬಂಧಿತರಾಗಿರುವವರೆಲ್ಲರೂ ಇವನ ಸೂಚನೆಯ ಮೇರೆಗೆ ಭಾರತದಲ್ಲಿ ಅವರ ಧರ್ಮ ಗುರುಗಳ ಪ್ರವಚನವನ್ನು ಮಾಡುತ್ತಿದ್ದರು ಎಂಬ ಮಾಹಿತಿ ಸಹ ಲಭ್ಯವಾಗಿದೆ. ಈತನಿಗಾಗಿ ನಿರಂತರ ಹುಡುಕಾಟ ನಡೆಸಿದ್ದ ಪೊಲೀಸರು, ಈ ಆರೋಪಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

ಫೇಕ್ ಡಾಕ್ಯುಮೆಂಟ್ಸ್ ಗಳನ್ನು ಹೊಂದಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ನುಸುಳುವಂತೆ ಮಾಡಲು ಇವನೇ ಪ್ರಮುಖ ರೂವಾರಿಯಾಗಿದ್ದ ಎನ್ನಲಾಗಿದೆ. ಈ ಯೂನಸ್ ಆಲ್ಗೋರ್ ಧರ್ಮ ಗುರುಗಳ ಪ್ರವಚನಗಳ ಪ್ರಚಾರಕ ಎಂಬುದು ತಿಳಿದುಬಂದಿದೆ.

Ad
Ad
Nk Channel Final 21 09 2023