News Karnataka Kannada
Tuesday, May 07 2024
ಬೆಂಗಳೂರು

ಕರ್ತವ್ಯದ ವೇಳೆ ಮೃತಪಟ್ಟ ಪೊಲೀಸರಿಗೆ 50 ಲಕ್ಷ ರೂ. ಪರಿಹಾರ ಸಿಎಂ ಘೋಷಣೆ

A compensation of Rs 50 lakh will be given to the policemen who died in the line of duty. CM announces relief
Photo Credit : News Kannada

ಬೆಂಗಳೂರು: ಕರ್ತವ್ಯದ ವೇಳೆ ಮೃತಪಟ್ಟ ಪೊಲೀಸರಿಗೆ 50 ಲಕ್ಷ ರೂ. ಪರಿಹಾರ ಕೊಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುತ್ತದೆ. 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25 ಕೋಟಿ ರೂ. ರಿಲೀಸ್ ಮಾಡಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು