News Karnataka Kannada
Friday, May 17 2024
ಬೆಂಗಳೂರು

ಬೆಂಗಳೂರಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಸಗಿ ಕಂಪನಿಯ ಕಟ್ಟಡ

Bng
Photo Credit : NewsKarnataka

ಬೆಂಗಳೂರು: ಆರ್‌.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಖಾಸಗಿ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸುಮಾರು 60 ಮಂದಿ ಕಟ್ಟಡದ ಒಳಗಡೆ ಇದ್ದರು ಎಂದು ತಿಳಿದು ಬಂದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಿರಾಕಲ್ ಡ್ರಿಂಕ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡದ ಕೆಳ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೆಂಕಿ ಅವಘಡ ಸಂಭವಿಸಿದಾಗ ಕೆಲ ಉದ್ಯೋಗಿಗಳು ಕಟ್ಟಡದಲ್ಲಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು, RT ನಗರ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.  ಅಗ್ನಿ ಅನಾಹುತದ ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು