ನೆಲಮಂಗಲ : ಹಾಡಹಗಲೇ ಮೂವರು ದರೋಡೆಕೋರರು ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿರುವ ಘಟನೆ ನೆಲಮಂಗಲದ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್ ಅಂಗಡಿಯಲ್ಲಿ ನಡೆದಿದೆ.
ಬೈಕ್ನಲ್ಲಿ ಬಂದಿದ್ದ ಮೂವರು ದರೋಡೆಕೋರರು ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಮಹಾಲಕ್ಷ್ಮೀ ಜ್ಯುವೆಲರ್ಸ್ಗೆ ನುಗ್ಗಿದ್ದಾರೆ. ಬಂಗಾರದ ಅಂಗಡಿಯಲ್ಲಿದ್ದವರಿಗೆ ಡ್ಯಾಗರ್ ತೋರಿಸಿ ಬೆದರಿಸಿರುವ ಆರೋಪಿಗಳು, ಶೋ ಗ್ಲಾಸ್ನಲ್ಲಿದ್ದ 20 ಉಂಗುರಗಳು ಇದ್ದ ಟ್ರೇ ದೋಚಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಕೆಲ ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ.
ಒಟ್ಟು 5 ಉಂಗುರಗಳು ಕಳವಾಗಿರುವ ಬಗ್ಗೆ ಶಾಪ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ಕಳುವಾಗಿರುವ ಬಂಗಾರದ ಒಟ್ಟು ತೀಕ ಸುಮಾರು 35 ಗ್ರಾಂ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಗ್ರಾಮಾಂತರ ಭಾಗದ ಪೊಲೀಸರು ತನಿಖೆ ಆರಂಭಿಸಿದ್ದು, ಬಂಗಾರದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ.

