ಬೆಂಗಳೂರು: ಹೈಕೋರ್ಟ್ನ ಹಾಲ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಕುತ್ತಿಗೆಯನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆ ಜಡ್ಜ್ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.