Bengaluru 23°C
Ad

ಹಾಸ್ಪಿಟಲ್​​ನಲ್ಲಿ ಅಮಾನವೀಯ ಘಟನೆ : ಐಸಿಯುನಲ್ಲಿ ಇದ್ದ ವ್ಯಕ್ತಿಗೆ ರಕ್ತ ಬರುವಂತೆ ಥಳಿತ

ಕೆಸಿ ಜನರಲ್ ಹಾಸ್ಪಿಟಲ್​ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ.

ಬೆಂಗಳೂರು : ಕೆಸಿ ಜನರಲ್ ಹಾಸ್ಪಿಟಲ್​ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ. ನೆಲಮಂಗಲ ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಈ ವೇಳೆ ಆಸ್ಪತ್ರೆಯ ವಾರ್ಡ್ ಬಾಯ್ ಧನಂಜಯ್ ಎಂಬಾತ ಇಗ್ಗಾ ಮುಗ್ಗ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ಚಿಕಿತ್ಸೆ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿತ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆಸ್ಪತ್ರೆ ಬೇಜವಾಬ್ದಾರಿತನದ ವಿರುದ್ಧ ಗಾಯಾಳು ವೆಂಕಟೇಶ್ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad
Ad
Nk Channel Final 21 09 2023
Ad