Bengaluru 22°C
Ad

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

Ad
300x250 2

ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

Ad
Ad
Nk Channel Final 21 09 2023
Ad