ಬೆಂಗಳೂರು: ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ರೇಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಆಟೋದಲ್ಲಿ ಕರೆತಂದು ಅತ್ಯಾಚಾರ ಎಸಗಿರಬಹುದು ಎನ್ನಲಾಗಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರಿಂದ ಹಿರಿಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.