ಬೆಂಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಬಿಎ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲುಹುಣಸೆ ಗ್ರಾಮದ ಬಳಿ ನಡೆದಿದೆ.
ಮುಖೇಶ್ (22) ಹಾಗೂ ಆಕಾಶ್ (22) ಮೃತ ವಿದ್ಯಾರ್ಥಿಗಳು. ಮೃತರು ಮೂಲತಃ ತಮಿಳುನಾಡಿನವರಾಗಿದ್ದು, ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ಓದುತ್ತಿದ್ದರು. ಶನಿವಾರ ತಡರಾತ್ರಿ ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಬೆಂಗಳೂರು ಕಡೆಯಿಂದ ಕನಕಪುರದ ಕಡೆಗೆ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Ad