ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.
ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಚಿತೆಗೆ ಅಗ್ನಿಸ್ಪರ್ಷಕ್ಕೂ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು.
ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಅಲ್ಲಿಗೆ ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾದರು.
ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.