ಸ್ಯಾಂಡಲ್‌ ವುಡ್ ನಟ ಕೆ.ಶಿವರಾಮ್ ವಿಧಿವಶ

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹೃದಯಾಘಾತದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ದೃಢಪಡಿಸಿದ್ದಾರೆ.

ಕೆ. ಶಿವರಾಮು ಅವರು 6 ಏಪ್ರಿಲ್ 1953 ರಂದು ರಾಮನಗರ ಜಿಲ್ಲೆಯ ಉರಗಲ್ಲಿಯಲ್ಲಿ ಜನಿಸಿದರು. ತಂದೆ ಎಸ್.ಕೆಂಪಯ್ಯ ಮತ್ತು ತಾಯಿ ಚಿಕ್ಕಬೋರಮ್ಮ. ತಮ್ಮ ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಬೆಂಗಳೂರಿಗೆ ತೆರಳಿ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಾಲೆ ಓದಿದರು. ಕನ್ನಡ ಭಾಷೆಯಲ್ಲಿ IAS ಪರೀಕ್ಷೆಯಲ್ಲಿ ತೇರ್ಗಡೆಯಾದ ಮೊದಲಿಗ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಬಳಿಕ 1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

Ashitha S

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

10 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

34 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

46 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

56 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago