ಬೆಂಗಳೂರು: ರಾಮಮಂದಿರ ಉದ್ಘಾಟನೆಗೆ ಹಿರಿಯ ಬಿಜೆಪಿಗರಿಗೆ ಆಹ್ವಾನ ನೀಡಿಲ್ಲ ಎಂಬುದು ಬಹುದೊಡ್ಡ ವಿವಾದವಾಗಿತ್ತು. ಅದೀಗ ತಣ್ಣಗಾಗಿದೆ. ಈ ನಡುವೆ ದಕ್ಷಿಣ ಭಾರತ ಚಿತ್ರರಂಗದ ಹಲವು ನಟರಿಗೆ ಆಹ್ವಾನ ನೀಡಲಾಗಿದ್ದು ನಟ ಯಶ್ ಅವರಿಗೂ ಕೂಡ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ರಿಷಬ್ ಮತ್ತು ಯಶ್ ಉದ್ಘಾಟನೆ ಸಮಾರಂಭಕ್ಕೆ ಹೋಗಲಿದ್ದಾರೆ. ಜೊತೆಗೆ ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.
2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ