Bengaluru 22°C
Ad

ಗಂಡನಿಂದಲೇ ‘ಭಜರಂಗಿ’ ಸಿನಿಮಾ ನಟಿ, ಕಾಂಗ್ರೆಸ್‌ ಮುಖಂಡೆ ಬರ್ಬರ ಹತ್ಯೆ

ಶಿವರಾಜ್‌ಕುಮಾರ್ ನಟನೆಯ ಭಜರಂಗಿ ಚಿತ್ರದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ತನ್ನ ಗಂಡನಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಭಜರಂಗಿ ಚಿತ್ರದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ತನ್ನ ಗಂಡನಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು.ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ.

ವಿದ್ಯಾ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ಶಂಕಿಸಿದ್ದಾರೆ. =ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

 

Ad
Ad
Nk Channel Final 21 09 2023
Ad