News Karnataka Kannada
Sunday, May 19 2024
ಬೆಂಗಳೂರು

ಎಂಡಿ, ಸಿಇಒ ಕೊಲೆ ಕೇಸ್: ಜಿ-ನೆಟ್​​ ಕಂಪನಿ ಮಾಲೀಕ ಅರುಣ್ ಅರೆಸ್ಟ್

company md-ceo murder case
Photo Credit : By Author

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಕುಮಾರ್​ನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅರುಣ್ ಕುಮಾರ್ ಎಂಡಿ ಫಣೀಂದ್ರ, ಸಿಇಒ ವಿನುಕುಮಾರ್ ಕೊಲೆಗೆ ಸುಪಾರಿ ನೀಡಿದ್ದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.

ಅಮೃತಹಳ್ಳಿ ಪೊಲೀಸರು ಆರೋಪಿ ಅರುಣ್​ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಜೋಕರ್​​ ಫಿಲೆಕ್ಸ್​ಗೆ ಸುಪಾರಿ ನೀಡಿದ್ದಾಗಿ ಅರುಣ್ ಒಪ್ಪಿಕೊಂಡಿದ್ದಾನೆ.  ಕೊಲೆಯಾದ ಫಣೀಂದ್ರ, ವಿನುಕುಮಾರ್ ಇಬ್ಬರೂ ಜಿ-ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಫಿಲೆಕ್ಸ್​ ಕೂಡಾ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಫಣೀಂದ್ರ, ವಿನುಕುಮಾರ್ ಜಿ-ನೆಟ್ ಕಂಪನಿ ಬಿಟ್ಟು ಹೊಸ ಕಂಪನಿ ಆರಂಭಿಸಿದ್ದರು. ಜಿ-ನೆಟ್​​ ಕಂಪನಿಯ ಹಲವು ನೌಕರರು ಫಣೀಂದ್ರ ಕಂಪನಿಗೆ ಸೇರಿದ್ದರು. ಇದರಿಂದ ಜಿ-ನೆಟ್​​ ಕಂಪನಿ ನಷ್ಟಕ್ಕೆ ಸಿಲುಕಿತ್ತು. ಇದರಿಂದ ಅರುಣ್ ಆಕ್ರೋಶಗೊಂಡಿದ್ದ. ಹೀಗಾಗಿ  ಫಣೀಂದ್ರ ಕೊಲೆಗೆ ಫಿಲೆಕ್ಸ್​​ಗೆ ಸುಪಾರಿ ನೀಡಿದ್ದ ಎಂದು ವಿಷಯ ತಿಳಿದು ಬಂದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು