ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕೆಲಸಕ್ಕೆ ಲಂಚ ನಿಗದಿ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಬರೆಯಲಾಗಿದ್ದ ಪತ್ರದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆ.ಆರ್.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್, ಗುರುದತ್ ಎನ್ನುವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಅರೋಪ ಪತ್ರವನ್ನು ಬರೆದಿರುವುದು ಇವರೇ ಎನ್ನುವುದು ತಿಳಿದುಬಂದಿದೆ.
ಇನ್ನು ಪತ್ರ ಬರೆಯಲು ಹೇಳಿದ್ಯಾರು? ಲಂಚ ಕೇಳಿದ್ದಕ್ಕೆ ರಾಜ್ಯಪಾಲರಿಗೆ ಪತ್ರ ಬರೆಯಲಾಯಿತೇ? ಈ ಪತ್ರ ಬರೆದಿರುವ ಹಿಂದಿನ ಉದ್ದೇಶವೇನು? ಹೀಗೆ ಹಲವು ಆಯಾಮಗಳಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
Karnataka: Congress hasn’t learned any lesson yet, says Congress leader N. Cheluvarayaswamy https://t.co/hMbQMxR2uL pic.twitter.com/ptfJpHwys4
— The Siasat Daily (@TheSiasatDaily) June 7, 2019