ಬೆಂಗಳೂರು : ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ.
ಲೇಬಲ್ ಗಳ ಮೇಲೆ ಗಮನ ಹರಿಸುತ್ತಿರುವ ಇಲಾಖೆ ವಿಶೇಷವಾಗಿ ಆಲ್ಕೋಹಾಲ್ ಅಂಶ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಬಹಿರಂಗಪಡಿಸದೆ ಮಾರಾಟವಾಗುವ ಉತ್ಪನ್ನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಈ ಅಭಿಯಾನ ಆರಂಭಿಸಿದೆ. ಚಾಕ್ಲೇಟ್ ಗಳನ್ನು ಮಕ್ಕಳು ಹೆಚ್ಚಾಗಿ ಸೇವಿಸೋದ್ರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಳಾಗಿದೆ.

