ಬೆಂಗಳೂರು: ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್ ದರ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಕುರಿತು ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ಐದೂ ಎಸ್ಕಾಂಗಳು ಪ್ರತಿ ಯುನಿಟ್ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡಬೇಕು ಎಂದು ಒತ್ತಾಯಿಸಿವೆ.
ಯುನಿಟ್ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರ ಪ್ರತಿಯ ದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿತ್ತು. ಅದನ್ನು KERC ಪರಿಶೀಲನೆ ನಡೆಸಿ ಬೆಸ್ಕಾಂ ಹಾಗೂ ಗ್ರಾಹಕರು ಇಬ್ಬರಿಗೂ ಹೊರೆಯಾಗದ ರೀತಿಯಲ್ಲಿ ಸದ್ಯದಲ್ಲೇ ದರ ಪರಿಷ್ಕರಣೆ ಮಾಡಲಿದೆ.