News Karnataka Kannada
Monday, April 29 2024
ಬೆಂಗಳೂರು

ಕಮಿಷನ್‌ ಗಿರಾಕಿಗೆ ಕಾಣೋದೆಲ್ಲ ಲಂಚವೇ: ಎಚ್‌ ಡಿಕೆಗೆ ಸಿಎಂ ಟಾಂಗ್‌

‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದರು.
Photo Credit : News Kannada

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ಆಗ್ತಿದ್ದಂತೆ, ವಿಪಕ್ಷ ನಾಯಕರು ಹೆಚ್​ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದ್ದರು. ಮುಂದುವರಿದ ಭಾಗವೆಂಬಂತೆ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

ಇದೀಗ ಸಿದ್ದರಾಮಯ್ಯ ತಮ್ಮ ಹಾಗೂ ಮಗನ ನಡುವೆ ನಡೆದ ಸಂಭಾಷಣೆಯನ್ನು ವಿವರಿಸಿದ್ದಾರೆ. ಎಲ್ಲಾ ಆರೋಪಗಳಿಗೆ ಉತ್ತರ ಕೊಟ್ಟಿದ್ದಾರೆ.

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ.

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು.

ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ.

ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು