Ad

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಗಂಭೀರ ಆರೋಪ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್​ನ ಖ್ಯಾತ ಗಾಯಕ ಲಕ್ಕಿ ಅಲಿ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್​ನ ಖ್ಯಾತ ಗಾಯಕ ಲಕ್ಕಿ ಅಲಿ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

Ad
300x250 2

ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಈ ಸಂಬಂಧ ತಮ್ಮ ಟ್ವೀಟರ್​ ಖಾತೆಯಲ್ಲಿ ದೂರಿನ ಪ್ರತಿಯನ್ನು ಶೇರ್ ಮಾಡಿಕೊಂಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಅವರು, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದಾರೆ.

Ad
Ad
Nk Channel Final 21 09 2023
Ad