ಬೆಂಗಳೂರು : ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ(74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ ಅವರು ಅನಾರೋಗ್ಯದಿಂದಾಗಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಇನ್ನು ಅವರ ಹುಟ್ಟೂರು ಬಿಡದಿಯಲ್ಲಿಅಂತ್ಯಕ್ರಿಯೆ ನಡೆಯಲಿದೆ.

ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ, ತತ್ವಪದಗಳ ಹರಿಕಾರಕ. ಇವರು ರಚಿಸಿ, ಹಾಡಿರುವ ಹಾಡುಗಳು ಇಂದಿಗೂ ಜನಪ್ರಿಯ.ಆಲೂರು ನಾಗಪ್ಪ, ಗಾಯಕರಾಗಿ ಮಾತ್ರವಲ್ಲ, ಕನ್ನಡಪರ ಹೋರಾಟಗಾರರಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಇನ್ನು ಇವರ ಮಗಳು ದಿವ್ಯ ಅಲೂಕು ಕೂಡ ನಿರೂಪಕಿ, ಗಾಯಕಿಯಾಗಿದ್ದಾರೆ.