News Karnataka Kannada
Tuesday, April 30 2024
ಬೆಂಗಳೂರು

ಬೆಂಗಳೂರು: ರಾಜ್ಯಕ್ಕೆ ಅಮಿತ್ ಶಾ ಆಗಮನ, ಎಸ್.ಟಿ.ಸೋಮಶೇಖರ್ ಅವರಿಂದ ಸಿದ್ಧತೆ ಪರಿಶೀಲನೆ

Amit Shah arrives in Karnataka, S.T. Somashekar reviews preparations
Photo Credit : Facebook

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಡಿಸೆಂಬರ್ 30ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರಿನ ಅರಮನೆ ಆವರಣದಲ್ಲಿ ಡಿಸೆಂಬರ್ 30ರ ಸಂಜೆ ಹಮ್ಮಿಕೊಂಡಿರುವ ‘ಸಹಕಾರ ಫಲಾನುಭವಿಗಳ ಸಮಾವೇಶ’ ಕಾರ್ಯಕ್ರಮದ ಸಿದ್ಧತೆ ಕುರಿತು ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿ ಸಭೆ ನಡೆಸಿದರು.

ಸಮಾವೇಶದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ನಿರ್ದೇಶಕರು, ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಹಾಲು ಪೂರೈಕೆ ಮಾಡುವವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಬೆಂಗಳೂರಿನ ವಿವಿಧ ಸಹಕಾರ ಸಂಸ್ಥೆಗಳ ನಿರ್ದೇಶಕರೂ, ಸಹಕಾರಿಗಳು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನಂತರ ಮದ್ದೂರಿನ ಗೆಜ್ಜಲಗೆರೆ ಡೇರಿಗೆ ಸಚಿವರು ಭೇಟಿ ನೀಡಿದರು. ಡಿಸೆಂಬರ್ 30ರಂದು ಅಮಿತ್ ಶಾ ಅವರು ಉದ್ಘಾಟಿಸಲಿರುವ ನೂತ ಮೆಗಾ ಡೇರಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಈ ವೇಳೆ ಸಚಿವರುಗಳಾದ ಗೋಪಾಲಯ್ಯ, ನಾರಾಯಣಗೌಡ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಸತೀಶ್ ಸೇರಿದಂತೆ ನಾನಾ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು