ಕ್ಷಣ ಮಾತ್ರದಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್

ಬೆಂಗಳೂರು: ಬೆಂಗಳೂರು ಜೆಪಿನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿರೋ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್​ನಲ್ಲಿ ಏಕಾಏಕಿ ಹೊಗೆ ಬಂದು ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕ್ಷಣ ಮಾತ್ರದಲ್ಲಿ ರಸ್ತೆ ಬದಿಗೆ ಕಾರನ್ನು ನಿಲ್ಲಿಸಿದ್ದಾರೆ. ಬಳಿಕ ನೋಡ ನೋಡುತ್ತಿದ್ದಂತೆ ಕಾರು ಸ್ಥಳದಲ್ಲೇ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಭಸ್ಮಗೊಂಡಿದೆ. ಇನ್ನು, ಕಾರಿನಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Ashika S

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

4 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

26 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

31 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

49 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

51 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

55 mins ago