ಬೆಂಗಳೂರು: ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಇಂದು(ಆ.8ರಂದು) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆಂಧ್ರ ಪ್ರದೇಶದ ಡಿಸಿಎಂ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಆಂಧ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವರೂ ಆಗಿರುವ ಪವನ್ ಕಲ್ಯಾಣ್ ಅವರು, ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಆನೆ ಹಾವಳಿ ತಡೆಗಟ್ಟುವ ಸಂಬಂಧ ನಡೆಯಲಿರುವ ಸಭೆಯಲ್ಲಿ ಅವರು ಭಾಗಿಯಾಗಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಆಗಿದ್ದಾರೆ.
https://x.com/siddaramaiah/status/1821450756442001593
Ad