News Karnataka Kannada
Saturday, April 13 2024
Cricket
ಬೆಂಗಳೂರು

ಕಡ್ಡಾಯ ಕನ್ನಡ ವಿಧೇಯಕ ಅಂಗೀಕಾರ: ನಾಮಫಲಕಗಳಲ್ಲಿ ಶೇ. 60 ಕನ್ನಡ ಕಡ್ಡಾಯ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ-2024 ವಿಧಾನಸಭೆಯಲ್ಲಿ ಅಂಗೀಕಾರ ಆಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆ ವೇಳೆ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿದರು. ಅಂಗಡಿ, ಮುಂಗಟ್ಟು ಎಲ್ಲ ಕಡೆ ಕನ್ನಡ ಕಡ್ಡಾಯಗೊಳಿಸಬೇಕು. ನಾಮಫಲಕಗಳಲ್ಲಿ ಶೇಕಡಾ 60 ಕನ್ನಡ ಇರಬೇಕು.
Photo Credit : News Kannada

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ-2024 ವಿಧಾನಸಭೆಯಲ್ಲಿ ಅಂಗೀಕಾರ ಆಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆ ವೇಳೆ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿದರು. ಅಂಗಡಿ, ಮುಂಗಟ್ಟು ಎಲ್ಲ ಕಡೆ ಕನ್ನಡ ಕಡ್ಡಾಯಗೊಳಿಸಬೇಕು. ನಾಮಫಲಕಗಳಲ್ಲಿ ಶೇಕಡಾ 60 ಕನ್ನಡ ಇರಬೇಕು.

ಈ‌ ಬಗ್ಗೆ ವಿಧೇಯಕವನ್ನು ನಾವು ತಂದಿದ್ದೇವೆ. ಈ‌ ತಿದ್ದುಪಡಿಯನ್ನು ಅಂಗೀಕರಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಮನವಿ ಮಾಡಿದರು.

ವಿಧೇಯಕವನ್ನು ಸ್ವಾಗತಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಅಶೋಕ್, ಕನ್ನಡ ಕಡ್ಡಾಯ ಎಂದು ಕೇಳಿ ಕೇಳಿ ಸಾಕಾಗಿ ಹೋಗಿದೆ. ಆದರೆ ಕನ್ನಡ ಕಡ್ಡಾಯ ಅನುಷ್ಠಾನ ಆಗಬೇಕು. ಮಾಲ್ ಮಾಲೀಕರು ಕನ್ನಡ ಕಡ್ಡಾಯ ನೋಟಿಸ್​ಗೆ ತಡೆ ತರ್ತಾರೆ. ಮೊನ್ನೆ ಹೋರಾಟದ ವೇಳೆ ನೋಡಿದ್ದಾಯ್ತು.

ಸರ್ಕಾರ ಮಾಲ್​ಗಳನ್ನು ಮುಚ್ಚಬೇಕೆಂದು ಹೋರಾಟ ನಡೆಯಿತು. ಆದರೆ ಐದೇ ನಿಮಿಷದಲ್ಲಿ ತಡೆ ತಂದರು. ಇದರಲ್ಲಿ ದಂಡವನ್ನ ವಿಧಿಸುವ ಅಂಶವನ್ನು ಸೇರಿಸಿ ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಅಶೋಕ್‌ ಸಲಹೆ ನೀಡಿದರು.

ಇನ್ನು ಇದರಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ. ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ. ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ. ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ. ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು