Bengaluru 28°C
Ad

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲೇ ಪ್ರಕಟಣೆ : ನವೆಂಬರ್​ 1ರಿಂದ ಜಾರಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ  ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ  ಅವರು ಸೋಮವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ  ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ  ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ  ಅವರು ಸೋಮವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ  ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ.

ಜೋಶಿ ಅವರು ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಅವರನ್ನು ಭೇಟಿ ಮಾಡಿ ವಿಮಾನ ನಿಲ್ದಾಣದಲ್ಲಿ ಕನ್ನಡವನ್ನು ಉತ್ತೇಜಿಸುವ ಹಾಗೂ ವಿಮಾನ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಸಮಯದಲ್ಲಿ ಕನ್ನಡವನ್ನು ಬಳಸುವ ಬಗ್ಗೆ ಚರ್ಚಿಸಿದರು. ಚರ್ಚೆ ಬಳಿಕ ಮಾತನಾಡಿದ ಜೋಶಿ, ಕನ್ನಡ ರಾಜ್ಯೋತ್ಸವ ದಿನದಿಂದ (ನವೆಂಬರ್ 1) ವಿಮಾನಗಳಲ್ಲಿ ಕನ್ನಡದಲ್ಲೇ ಅನೌನ್ಸ್ಮೆಂಟ್ ಮಾಡುವುದನ್ನು ಪ್ರಾರಂಭಿಸಲು ನಾನು ಅವರನ್ನು ಕೇಳಿದ್ದೇನೆ. ಏಕೆಂದರೆ ಈ ವ್ಯವಸ್ಥೆಯನ್ನು ವಿಮಾನಗಳಲ್ಲಿ ಅಳವಡಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ವಿಮಾನಗಳಲ್ಲಿ ಮೊದಲ ಪ್ರಕಟಣೆಯು ಕನ್ನಡದಲ್ಲಿರಬೇಕು, ನಂತರ ಇತರ ಭಾಷೆಗಳನ್ನು ಅನುಸರಿಸಬೇಕು. ಬ್ರಿಟಿಷ್ ಏರ್ವೇಸ್ ಮತ್ತು ಸಿಂಗಾಪುರ್ ಏರ್ಲೈನ್ಸ್ ಈಗಾಗಲೇ ಇದನ್ನು ಕಾರ್ಯಗತಗೊಳಿಸಲು ಪ್ರಾರಂಭಿಸಿವೆ ಎಂದು ತಿಳಿಸಿದರು.

Ad
Ad
Nk Channel Final 21 09 2023