ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್ ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.
ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.9ರಂದು 18 ಅಧಿಕಾರಿಗಳಿಗೆ ಲೋಕಾಯುಕ್ತ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು. 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಇಡಿಯಿಂದ ECIR ದಾಖಲಾದ ಬೆನ್ನಲ್ಲೇ ಸಿಎಂ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಮುಡಾಗೆ ನೀಡುವುದಾಗಿ ಪತ್ರ ಬರೆದಿದ್ದರು.