ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪಡೆಯುವ ಸಾಧ್ಯತೆ: ಸಚಿವರು ಏನು ಹೇಳಿದ್ರು ಗೊತ್ತಾ

ಬೆಂಗಳೂರು: ಕರ್ನಾಟಕದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯು ಸಿದ್ದು ಸರಕಾರ ಬಂದಿರುವ ಬೆನ್ನಲ್ಲೇ ಹಿಂದಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸ್ವತಃ ಈ ಬಗ್ಗೆ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ‘ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂದಕ್ಕೆ ತೆಗೆದುಕೊಳ್ಳಬೇಕೋ ಅಥವಾ ಬೇಡವಾ? ಅನ್ನುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಎಮ್ಮೆ , ಕೋಣೆಗಳನ್ನು ಕಡಿಯುವುದಾದ್ರೆ ಹಸುಗಳನ್ನು ಏಕೆ ಕಡಿಯಬಾರದು? ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೆಗೆದು ಮುಚ್ಚಲು ಬಹಳ ಕಷ್ಟವಾಯಿತು. ೨೫ ಮಂದಿ ಬಂದ್ರೂ ಹಸುವನ್ನು ಎತ್ತಲೂ ಆಗಿರಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮಣ್ಣು ಮಾಡಬೇಕಾಯಿತು. ಎಲ್ಲವನ್ನೂ ಗಮನಿಸಿಕೊಂಡು ಸರಕಾರ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಸಚಿವ ವೆಂಕಟೇಶ್ ತಿಳಿಸಿದರು. ೨೦೨೧ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದನ್ನು ಸ್ಮರಿಸಬಹುದು.

Ashika S

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

12 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

28 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

39 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

44 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

1 hour ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago