Bengaluru 29°C
Ad

ಅರೆಸ್ಟ್‌ ಆದ ಪ್ರಜ್ವಲ್‌ ರೇವಣ್ಣನಿಗೆ ಮೊದಲು ನಡೆಯೋದೇ ಆ ಟೆಸ್ಟ್‌

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಇಂದು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಎಸ್‌ಐಟಿ ಮುಂದಾಗಿದೆ.

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಇಂದು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಎಸ್‌ಐಟಿ ಮುಂದಾಗಿದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ- ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ.

ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು

Ad
Ad
Nk Channel Final 21 09 2023
Ad