ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿರುವ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥಗೊಂಡಿದ್ದಾರೆ.ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೂಡ ಕೇಳಿ ಬಂದಿದೆ.ನಂತರ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಮಧ್ಯರಾತ್ರಿ ಬಂಧಿಸಿದ್ದರು.
ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್ನನ್ನು ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು ಇದೀಗ ಬೆಳಗಿನ ಜಾವ 4.45 ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿಯನ್ನು ಕರೆದುಕೊಂಡು ಬಂದಿದ್ದಾರೆ.

