ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ ತನಿಖೆ ಸಂಬಂಧಿಸಿದಂತೆ, ನಿನ್ನೆ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗಿತ್ತು.
ಅದರ ಬೆನ್ನೆಲ್ಲೇ ಇಂದು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತರನ್ನು 6 ದಿನ SIT ಕಸ್ಟಡಿಗೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

