Bengaluru 22°C
Ad

ವಾಲ್ಮೀಕಿ ಅಭಿವೃದ್ಧಿ ನಿಗಮದ ವಂಚನೆ ಕೇಸ್ : ಬಂಧಿತರು 6 ದಿನ SIT ಕಸ್ಟಡಿಗೆ

ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ ತನಿಖೆ ಸಂಬಂಧಿಸಿದಂತೆ, ನಿನ್ನೆ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್​​ಐಟಿಗೆ ನೀಡಿತ್ತು

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ ತನಿಖೆ ಸಂಬಂಧಿಸಿದಂತೆ, ನಿನ್ನೆ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್​​ಐಟಿಗೆ ನೀಡಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗಿತ್ತು.

ಅದರ ಬೆನ್ನೆಲ್ಲೇ ಇಂದು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತರನ್ನು 6 ದಿನ SIT ಕಸ್ಟಡಿಗೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

Ad
Ad
Nk Channel Final 21 09 2023
Ad