Bengaluru 22°C
Ad

ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರೆಸ್ಟ್ ಮಾಡುತ್ತಾರೆ: ಜಿ.ಪರಮೇಶ್ವರ್

ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಾರೆಂಟ್ ಜಾರಿಯಾಗಿರುವುದರಿಂದ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಅರೆಸ್ಟ್ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. 

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಾರೆಂಟ್ ಜಾರಿಯಾಗಿರುವುದರಿಂದ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಅರೆಸ್ಟ್ ಮಾಡುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಪ್ರಜ್ವಲ್ ವಾಪಸ್ ಆಗುವ ಕುರಿತು ಮಾತನಾಡಿದ ಅವರು, ವಾರೆಂಟ್ ಇರುವುದರಿಂದ ಪ್ರಜ್ವಲ್ ರೇವಣ್ಣ ಅವರು ಬರುತ್ತಿದ್ದಂತೆ ಅರೆಸ್ಟ್ ಮಾಡಲೇಬೇಕಲ್ಲವೇ? ಅವರ ವಿರುದ್ಧ ವಾರೆಂಟ್ ಇರುವುದರಿಂದ ಅರೆಸ್ಟ್ ಮಾಡಬೇಕಲ್ಲ, ಅದನ್ನ ಮಾಡ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರ ಬಂಧನದಲ್ಲಿ ಬಿಜೆಪಿ, ಕಾಂಗ್ರೆಸ್, ದಳ ಅಂತಾ ಪ್ರಶ್ನೆ ಇಲ್ಲ. ಯಾರು ಈ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೋ ಅಂಥವರನ್ನ ಅರೆಸ್ಟ್ ಮಾಡ್ತಾರೆ. ಇದೀಗ 11 ಜನರನ್ನ ಅರೆಸ್ಟ್ ಮಾಡಿದ್ದಾರೆ. ಯಾರು ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವ ಅನುಮಾನ ಬರುತ್ತೋ, ಅವರನ್ನ ಬಂಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

Ad
Ad
Nk Channel Final 21 09 2023
Ad