News Karnataka Kannada
Tuesday, April 23 2024
Cricket
ಬೆಂಗಳೂರು

ರೋಗದ ಪತ್ತೆಗೆ ಕೃತಕ ಬುದ್ಧಿಮತ್ತೆ ಮೊರೆ ಹೋದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕ್ಯಾನ್ಸರ್​ಗೆ ತುತ್ತಾಗುತ್ತಿರೊ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ  ಕ್ಯಾನ್ಸರ್, ಹೃದಯ ಸಂಬಂಧಿ ಶ್ವಾಸಕೋಶ ಸಮಸ್ಯೆಗಳ ಪತ್ತೆಗೆ AI ತಂತ್ರಜ್ಞಾನದ ಮೊರೆ ಹೋಗಿದೆ.
Photo Credit : News Kannada

ಬೆಂಗಳೂರು:  ರಾಜ್ಯದಲ್ಲಿ ಕ್ಯಾನ್ಸರ್​ಗೆ ತುತ್ತಾಗುತ್ತಿರೊ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ  ಕ್ಯಾನ್ಸರ್, ಹೃದಯ ಸಂಬಂಧಿ ಶ್ವಾಸಕೋಶ ಸಮಸ್ಯೆಗಳ ಪತ್ತೆಗೆ AI ತಂತ್ರಜ್ಞಾನದ ಮೊರೆ ಹೋಗಿದೆ.

ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆ ಸೇರಿದಂತೆ 29 ಜಿಲ್ಲಾ ಆಸ್ಪತ್ರೆಗಳಲ್ಲಿ AI ಬಳಕೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಸದ್ಯ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ AI ಕೆಲಸ ಶುರು ಮಾಡಿದ್ದು ಈಗಾಗಲೇ ಒಟ್ಟು 2148 ರೋಗಿಗಳ ಸ್ಕ್ಯಾನಿಂಗ್ ನಲ್ಲಿ 909 ಅಸಹಜ ಲಕ್ಷಣ ಸಮಸ್ಯೆ ಹೊಂದಿರುವವರನ್ನ ಇದು ಗುರುತಿಸಿದೆ. 328 ರೋಗಿಗಳಲ್ಲಿ TB ಲಕ್ಷಣ ಚಿಕಿತ್ಸೆಯ ಅವಶ್ಯಕತೆ ಗುರುತಿಸಿ ಸಲಹೆ ನೀಡಿದೆ. ಸದ್ಯ ಇದರಿಂದ ವೈದ್ಯರಿಗೆ ತುರ್ತು ಚಿಕಿತ್ಸೆ ನೀಡಲು ತುಂಬಾ ಸಹಾಯಕವಾಗಿದೆ. ಇನ್ನು ರೋಗಿಗಳ ಜೀವ ಉಳಿಸುವಲ್ಲಿಯೂ ಮಹತ್ವದ ಪಾತ್ರ ನಿರ್ವಹಿಸುತ್ತಿದೆ.

ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಹಲವಾರು ಮಂದಿ ಸಡನ್ ಡೆತ್ ಗೆಕಾರಣವಾಗುತಿದ್ದರೆ.  ಖಾಯಿಲೆ ಕೊನೆಯ ಹಂತದಲ್ಲಿ ಕಂಡು ಬರುವುದು ಜನರ ಸಾವಿಗೆ ಕಾರಣವಾಗುತ್ತಿದೆ.

ಹೀಗಾಗಿ ಜನರ ಜೀವ ಉಳಿಸಲು. ತುರ್ತು ಖಾಯಿಲೆ ಪತ್ತೆ ಹಾಗೂ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲು AI ತಂತ್ರಜ್ಞಾನ ಆಸ್ಪತ್ರೆಗೆ ಲಗ್ಗೆ ಇಟ್ಟಿದೆ. ಲಂಗ್ಸ್ ಸಮಸ್ಯೆಗಳು, ಟಿಬಿ ಕೇಸ್, ಕ್ಯಾನ್ಸರ್, ಶ್ವಾಸಕೋಶ ಸಂಬಂಧಿ ಸಮಸ್ಯೆ, ಗ್ಯಾಸ್ಟ್ರೀಕ್ ಪ್ಲಾಬ್ಲಂ, ಹೃದಯ ಸಂಬಂಧಿ ಸಮಸ್ಯೆ ಏನೇ ಇದ್ರೂ ಇದು ಪತ್ತೆ ಹಚ್ಚಿ ವೈದ್ಯರಿಗೆ ಮುನ್ಸೂಚನೆ ನೀಡಲಿದೆ.

AI ಕೃತಕ ಬುದ್ಧಿಮತ್ತೆಯಿಂದ ಶ್ವಾಸಕೋಶ ಕ್ಯಾನ್ಸರ್ ತಪಾಸಣೆ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಿದ್ದು, ಆರಂಭಿಕ ಹಂತದಲ್ಲೇ ಶ್ವಾಸಕೋಶ ಕ್ಯಾನ್ಸರ್ ಪತ್ತೆಗೆ ಇದು ಅನುಕೂಲವಾಗಲಿದೆ.

ಪರೀಕ್ಷೆ ವೇಗ ಹೆಚ್ಚಿಸುವ ಉದ್ದೇಶದಿಂದ ಅಸ್ಟ್ರಾಜೆನೆಕಾ ಇಂಡಿಯಾ ಹಾಗೂ ರಾಜ್ಯ ಸರ್ಕಾರ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು