News Karnataka Kannada
Wednesday, May 01 2024
ಬೆಂಗಳೂರು

ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಿ ಅಶ್ವಿನಿ ಪುನೀತ್ ಗೆ ಆಹ್ವಾನ

ashwini punith
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಹ್ವಾನಿಸಿದ್ದಾರೆ. ದೊಡ್ಮನೆ ಕುಟುಂಬ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನ ಗಮನಿಸಿರುವ ಸಚಿವರು, ಆರೋಗ್ಯ ಇಲಾಖೆಯ ವತಿಯಿಂದ ಆಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.

ನಟ ಪುನೀತ್ ರಾಜ್‌ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದವರು. ತಮ್ಮ ಕಣ್ಣುಗಳನ್ನು ದಾನ ಮಾಡಿ, ಅಂಧರ ಬಾಳಿಗೆ ಅಪ್ಪು ಬೆಳಕಾಗಿದ್ದರು. ಅದಷ್ಟೇ ಅಲ್ಲ ಅಂಗಾಂಗ ದಾನದ ಮಹತ್ವವನ್ನು ಹೇಳಿ ಹೋಗಿದ್ದರು. ಅವರಿಂದ ಸ್ಫೂರ್ತಿಗೊಂಡ ಅದೆಷ್ಟೋ ಯುವಕರು, ಅವರ ಅಭಿಮಾನಿಗಳು ತಾವೂ ಅಂಗಾಂಗ ದಾನಕ್ಕೆ ಕೈಜೋಡಿಸಿದ್ದರು.

ಅಗಸ್ಟ್ 3 ರಂದು ಅಂಗಾಂಗ ದಾನ ದಿನಾಚರಣೆಗೆ ಆಚರಿಸುತ್ತಿರುವ ರಾಜ್ಯ ಆರೋಗ್ಯ ಇಲಾಖೆ, ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಸರ್ಕಾರ ಆಹ್ವಾನ ನೀಡಿದೆ. ಅಂಗಾಂಗ ದಾನದ ರಾಯಭಾರಿಯಾಗಿ, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸುವಂತೆ ಸರ್ಕಾರ ಮನವಿ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ವತಿಯಿಂದ ಆಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು