News Karnataka Kannada
Saturday, April 27 2024
ಬೆಂಗಳೂರು

ಅಸ್ಸಾಂ ಯುವತಿಯ ಮೇಲೆ ಅತ್ಯಾಚಾರ: ಆರೋಪಿಗಳಿಗಾಗಿ ಹುಡುಕಾಟ

ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
Photo Credit : IANS

ಬೆಂಗಳೂರು: ಬೆಂಗಳೂರಿನಲ್ಲಿ ಅಸ್ಸಾಂ ಮೂಲದ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರು  ಶಹೀದ್ ಉದ್ದೀನ್ ನನ್ನು ಬಂಧಿಸಿದ್ದು, ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಶಹೀದ್ ಉದ್ದೀನ್ ಸ್ನೇಹಿತರೆಂದು ಹೇಳಲಾದ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

ಸಂತ್ರಸ್ತೆ ಮತ್ತು ಶಹೀದ್ ಉದ್ದೀನ್ ಕಳೆದ ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದರು. ಸಂತ್ರಸ್ತೆಯನ್ನು ಮದುವೆಯಾಗುವ ಭರವಸೆ ನೀಡಿ ಆಕೆಯನ್ನು ಬೆಂಗಳೂರಿಗೆ ಕರೆತಂದು ಬಾಡಿಗೆ ಮನೆಯಲ್ಲಿ ಇಬ್ಬರು ವಾಸ ಮಾಡುತ್ತಿದ್ದರು.  ಈ ನಡುವೆ ಶಹೀದ್ ಉದ್ದೀನ್ ಮತ್ತು ಇತರ ನಾಲ್ವರು ಆರೋಪಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಅಲ್ಲದೆ ಮೊಬೈಲ್ ಫೋನ್  ನಲ್ಲಿ ಖಾಸಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದರು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ

ಶಹೀದ್ ಉದ್ದೀನ್ ಸಂತ್ರಸ್ತೆಯನ್ನು ಪ್ರೀತಿಸುವ ನೆಪವೊಡ್ಡಿ ಅವಳನ್ನು ವೇಶ್ಯಾವಾಟಿಕೆಗೆ ತಳ್ಳಲು ಯೋಜಿಸಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು