ಕಸದ ವಿಚಾರಕ್ಕೆ ಕಿರುತೆರೆ ನಟನ ಮೇಲೆ ಹಲ್ಲೆ: ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು:  ಖಾಲಿ ಜಾಗದಲ್ಲಿ ಕಸ ಇಟ್ಟು ಹೋಗುತ್ತಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಕಿರುತೆರೆ ನಟ ಚರಿತ್ ಬಾಳಪ್ಪ ಅವರು ಅನ್ನಪೂರ್ಣೇಶ್ವರಿನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಘಟನೆಯು ಅನ್ನಪೂರ್ಣೇಶ್ವರಿ ನಗರದ ಡಿ- ಗ್ರೂಪ್ ಲೇಔಟ್ ಬಳಿ ನಡೆದಿದೆ.

ಕಿರುತೆರೆ ನಟ ಚರಿತ್ ಬಾಳಪ್ಪ ಅವರು ಶೂಟಿಂಗ್​ಗೆ ಹೋಗುವ ಸಂದರ್ಭದಲ್ಲಿ ಕಸವನ್ನ ಹೊರಗಡೆಯ ಖಾಲಿ ಜಾಗದಲ್ಲಿ ಇಟ್ಟು ಹೋಗುತ್ತಿದ್ದರು.ಈ ವೇಳೆ ಪಕ್ಕದ ಮನೆಯವರು ಪ್ರಶ್ನೆ ಮಾಡಿದ್ದಾರೆ.ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಈ ವೇಳೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ನನ್ನ ಕಿರು ಬೆರಳಿಗೆ ಗಾಯ ಮಾಡಿದ್ದಾರೆಂದು ನಟ ದೂರಿನಲ್ಲಿ ತಿಳಿಸಿದ್ದಾರೆ.

Nisarga K

Recent Posts

ಹೆಲಿಕಾಪ್ಟರ್ ಪತನ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

10 seconds ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

17 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

35 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago