ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Ashika S

Recent Posts

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

4 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

19 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

40 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

2 hours ago