ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರೊಂದಿಗೆ ಶಿಕಾರಿಪುರದ ನಾಗರಾಜ್ ಗೌಡ ಅವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವಿನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕೆಪಿಸಿಸಿ ಅಧ್ಯಕ್ಷ ಸಲೀಂ ಅಹಮದ್, ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ ಮೊದಲಾದವರಿದ್ದರು.