ಹಿಜಾಬ್‌ ಧರಿಸಿ ಪರೀಕ್ಷೆ ಬರೆಯುವುದಕ್ಕೆ ನಿಷೇಧ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯದಲ್ಲಿನ ವಿವಿಧ ಮಂಡಳಿಗಳು ಮತ್ತು ನಿಗಮಗಳ ಮುಂಬರುವ ನೇಮಕಾತಿ ಪರೀಕ್ಷೆಗಳಲ್ಲಿ ಹಿಜಾಬ್‌ ಸೇರಿದಂತೆ ಎಲ್ಲ ರೀತಿಯ ಹೆಡ್‌ ಸ್ಕಾರ್ಫ್‌ ಅನ್ನು ನಿಷೇಧಿಸಿದೆ. ಅದೇ ರೀತಿ ಪರೀಕ್ಷಾ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಾದ ಫೋನ್‌ಗಳು ಮತ್ತು ಬ್ಲೂಟೂತ್ ಇಯರ್‌ಫೋನ್‌ಗಳನ್ನು ಪ್ರಾಧಿಕಾರ ನಿಷೇಧಿಸಿದೆ ಎಂದು ವರದಿಯಾಗಿದೆ.

ಆದರೆ ಬಲಪಂಥೀಯ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳಸೂತ್ರ ಮತ್ತು ಉಂಗುರ ಧರಿಸಲು ಅನುಮತಿ ಒದಗಿಸಿದೆ. ನವೆಂಬರ್ 18 ಮತ್ತು 19 ರಂದು ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಕೆಇಎ ಡ್ರೆಸ್ ಕೋಡ್ ಅನ್ನು ಪ್ರಕಟಿಸಿದೆ. ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಈ ಹಿಂದೆ, ಕರ್ನಾಟಕ ಸರ್ಕಾರವು ಕೆಇಎ ನಡೆಸುವ ನೇಮಕಾತಿ ಸಂಬಂಧಿತ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿತ್ತು. 2022 ರ ಜನವರಿಯಲ್ಲಿ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಆರು ಹುಡುಗಿಯರನ್ನು ಪ್ರವೇಶಿಸದಂತೆ ನಿರ್ಬಂಧಿಸಿದಾಗ ಹಿಜಾಬ್ ಪ್ರತಿಭಟನೆ ತೀವ್ರವಾಗಿತ್ತು. ಬಳಿಕ ಉಡುಪಿಯ ಹಲವಾರು ಕಾಲೇಜುಗಳ ಹುಡುಗರು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಲು ಆರಂಭಿಸಿದರು. ಪ್ರತಿಭಟನೆಯು ರಾಜ್ಯದ ಇತರ ಭಾಗಗಳಿಗೂ ಹರಡಿತ್ತು,

Ramya Bolantoor

Recent Posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ ಮಂಗಳೂರು / ಮುಂಬಯಿ : ತೀಯಾ ಸಮುದಾಯದ…

7 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

3 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

10 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

15 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

28 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

37 mins ago