ಬೆಂಗಳೂರು: ಗ್ರಾ. ಪಂ. ಅಧ್ಯಕ್ಷರನ್ನು ತೆಗೆದು ಹಾಕುವ ನಿಯಮ ವಾಪಸ್ ಪಡೆಯಲು ಸಿಎಂ ಗೆ ಮನವಿ

ಬೆಂಗಳೂರು: ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಕಾಯ್ದೆ ೧೯೯೩ ಪ್ರಕರಣ ೪೩(ಆ),೪೮(೪) ಹಾಗೂ ೪೮(೫)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ “ಗ್ರಾಮ ಪಂಚಾಯತಿಯ ಸದಸ್ಯ, ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು ೨೦೨೨” ಕರಡು ಅಧಿಸೂಚನೆಯ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಶಾಸಕರುಗಳಾದ ಮಂಜುನಾಥ ಭಂಡಾರಿ, ಎಸ್. ರವಿ, ದಿನೇಶ್ ಗೂಳಿಗೌಡ ಮಂಡ್ಯ, ರಾಜೇಂದ್ರ ರಾಜಣ್ಣ, ಮಧು ಮಾದೇಗೌಡ, ಅನಿಲ್ ಕುಮಾರ್ ಅವರು ಬುಧವಾರ (೨೪-೦೮-೨೦೨೨) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
“ಪ್ರಸ್ತುತ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಪ್ರಕರಣ ೪೩(ಎ) ಅಡಿ ದುರ್ನಡತೆಯ ಬಗ್ಗೆ ವ್ಯಾಖ್ಯಾನಿಸಿದ್ದರೂ ಯಾವುದೇ ರೀತಿಯ ಸ್ಪಷ್ಟತೆ ಇರುವುದಿಲ್ಲ. ನಿಯಮ ೨(ಸಿ)ಯಲ್ಲಿ ತನಿಖಾಧಿಕಾರಿ ಮತ್ತು ವಿಚಾರಾಣಾಧಿಕಾರಿಯ ಬಗ್ಗೆ ಗೊಂದಲವಿದ್ದು, ಯಾವುದೇ ನಿರ್ದಿಷ್ಟತೆ ಇರುವುದಿಲ್ಲ.  ದುರ್ನಡತೆ  ಹೆಸರಿನಲ್ಲಿ ದೂರು ಸ್ವೀಕಾರ, ತನಿಖೆ ಹಾಗೂ ವಿಚಾರಣೆ ಜವಾಬ್ದಾರಿಯನ್ನು ಕೆಳ ಹಂತದ ಅಧಿಕಾರಿಗಳಿಗೆ ನೀಡುವ ಮೂಲಕ ಸರ್ಕಾರ ಗ್ರಾಮ ಪಂಚಾಯತ ಪ್ರತಿನಿಧಿಗಳ ಪ್ರಜಾಸತಾತ್ಮಕ ಹಕ್ಕುಗಳನ್ನು ಅಧಿಕಾರಿಗಳ ಮೂಲಕ ಮೊಟಕುಗೊಳಿಸುವ ಹುನ್ನಾರ ನಡೆಸಿದ್ದಾರೆ. ತನ್ಮೂಲಕ ವಿಕೇಂದ್ರಿಕರಣದ ವಿರುದ್ಧ ಕೇಂದ್ರಿಕೃತ ಆಡಳಿತ ವ್ಯವಸ್ಥೆಯನ್ನು ಸ್ಥಾಪಿಸಲು ಹೊರಟಿದೆ” ಎಂದು ಶಾಸಕರುಗಳು ತಿಳಿಸಿದ್ದಾರೆ.
“ಪ್ರಕರಣ ೪೩(ಎ) ೪೮(೪)(೫) ರ ಅಡಿಯಲ್ಲಿ ದೂರು ಸ್ವೀಕರಿಸುವ ಅಧಿಕಾರ ಕಾಯ್ದೆಯಲ್ಲಿರುವಂತೆ ರಾಜ್ಯ ಸರ್ಕಾರಕ್ಕೆ ಮಾತ್ರ ಇರಬೇಕು ಮತ್ತು ಸದರಿ ದೂರಿನ ಮೇಲೆ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು.  ಸರ್ಕಾರದ ಈ ಕರಡು ನಿಯಮದಲ್ಲಿ ಬದಲಾವಣೆ ತರಬೇಕೆಂದು” ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಆಕ್ಷೇಪಣಾ ಮತ್ತು ಸಲಹೆಗಳಲ್ಲಿ ಶಾಸಕರುಗಳು ವಿವರಿಸಿದ್ದಾರೆ.
ಶಾಸಕರ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago