ಬೆಂಗಳೂರು

ಬೆಂಗಳೂರು| ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ:ಎಂ.ಶಿವಣ್ಣ

ಬೆಂಗಳೂರು: ನೇರ ಪಾವತಿ ಪೌರಕಾರ್ಮಿಕರು, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ ಮನೆ ಮನೆಯ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರು, ಹಾಗೂ ಪೌರ ಕಾರ್ಮಿಕರ ಮೇಲ್ವಿಚಾರಕರು ಮತ್ತು ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಏಕ ಕಾಲಕ್ಕೆ ಖಾಯಂಗೊಳಿಸುವ ಸಂಬಂಧ, ಎಲ್ಲಾ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರನ್ನು ಖಾಯಂಗೊಳಿಸಲು ಮುಖ್ಯಮಂತ್ರಿಗಳು  ತಾತ್ವಿತವಾಗಿ ಒಪ್ಪಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿಗಳ ನ್ಯಾಯಾಂಗಣ ಸಭಾಂಗಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಖಾಯಂಗೊಳಿಸುವಿಕೆಗೆ  ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ನಿಗಮದ ಅಧ್ಯಕ್ಷರುಗಳು ಹಾಗೂ ಸಂಬಂಧಪಟ್ಟ ಇಲಾಖಾ ಮುಖ್ಯ ಅಧಿಕಾರಿಗಳು ಮತ್ತು ಪೌರಕಾರ್ಮಿಕರ ಪ್ರತಿನಿಧಿಗಳು ಒಳಗೊಂಡಂತೆ ಸದರಿ ಸಮಿತಿಯನ್ನು ರಚಿಸಿ ಸಮಿತಿಯ ವರದಿಯನ್ವಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಐಪಿಡಿ ಸಾಲಪ್ಪನವರ ವರದಿ, ಚಂದ್ರಶೇಖರ್ ವರದಿ ಮತ್ತು ರಾಷ್ಟ್ರೀಯ ಕಾನೂನು ಶಾಲೆ ವರದಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 500 ಜನರಿಗೆ ಒಬ್ಬ ಪೌರಕಾರ್ಮಿಕರಂತೆ ನೇಮಿಸಿಕೊಳ್ಳಲು ಹಾಗೂ ಈ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಮೃತಪಟ್ಟಲ್ಲಿ ಅಥವಾ ನಿವೃತ್ತಿ ಹೊಂದಿದಲ್ಲಿ ತೆರವಾಗುವ ಹುದ್ದೆಗಳನ್ನು  ಕೂಡಲೇ ನೇಮಕ ಮಾಡಿಕೊಳ್ಳಲು  ಪಾಲಿಸಿ, ಆಕ್ಟ್ ಆಫ್‍ಲಾ ರೂಪಿಸಿಕೊಂಡು ಮುಂದಿನ ಅಧಿವೇಶನದಲ್ಲಿ ಮಂಡಿಸಿ ಕಾರ್ಯಗತಗೊಳಿಸಲಾಗುವುದು. ಕನಿಷ್ಠ ವೇತನ ರೂ.17ಸಾವಿರ ಇದ್ದು ಪೌರಕಾರ್ಮಿಕರ ಜೀವನ ನಿರ್ವಹಣೆಯು ಕಷ್ಟಕರವಾಗಿರುವುದರಿಂದ ಸಮಿತಿಯ ನಿರ್ಣಯದಂತೆ ವೇತನವನ್ನು ಹೆಚ್ಚಿಸಲು ಒಪ್ಪಿಗೆ ನೀಡಿರುತ್ತಾರೆ ಎಂದು ತಿಳಿಸಿದರು.

ರಾಜ್ಯದಲ್ಲಿರುವ ಒಟ್ಟು ಪೌರಕಾರ್ಮಿಕರ 54,512 ಇದ್ದು, 10,527 ಖಾಯಂ ಆಗಿರುವ ಪೌರಕಾರ್ಮಿಕರಿದ್ದಾರೆ. ಆರ್ಥಿಕ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಅನುಮೋದನೆಗೊಂಡು 10,380  ಖಾಯಂ ಗೊಳಿಸಲು ಬಾಕಿ ಉಳಿದಿವೆ. ಇವುಗಳನ್ನು ವಿಶೇಷ ನೇಮಕಾತಿ ಎಂದು ಪರಿಗಣಿಸಿ 1 ತಿಂಗಳ ಒಳಗಾಗಿ ಖಾಯಂ ಗೊಳಿಸಲು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.   ಉಳಿದಂತೆ ಬಾಕಿ ಇರುವ 33,605 ಹುದ್ದೆಗಳನ್ನು ಭರ್ತಿ ಮಾಡಲು ಮೇಲ್ಕಂಡಂತೆ ಸಮಿತಿಯನ್ನು ಆಕ್ಟ್ ಆಫ್ ಲಾ ಪ್ರಕಾರ ರಚಿಸಲಾಗುತ್ತದೆ. ಈ ಸಮಿತಿಯು ಹುದ್ದೆಗಳ ಭರ್ತಿಯಲ್ಲಿ ಇರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವ ಉದ್ದೇಶವನ್ನು ಹೊಂದಿರುತ್ತದೆ.

ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲೋಡರ್ಸ್, ಕ್ಲೀನರ್ಸ್, ಚಾಲಕರನ್ನು ನೇರಪಾವತಿಯ ಅಡಿಯಲ್ಲಿ ಪರಿಗಣಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಿರ್ವಹಿಸುತ್ತಿರುವ ವಾಹನಗಳಿಗೆ ಗುತ್ತಿಗೆ ಅಡಿ ಕಾರ್ಯನಿರ್ವಹಿಸುತ್ತಿರುವ ಲೋಡರ್ಸ್, ಕ್ಲೀನರ್ಸ್ ಮತ್ತು ಚಾಲಕರ ಹುದ್ದೆಗಳನ್ನು ನೇರಪಾವತಿ ಅಡಿ ನೇಮಿಸಿಕೊಂಡು ಹಂತಹಂತವಾಗಿ ಖಾಯಂಗೊಳಿಸಲಾಗುವುದು. ಅಲ್ಲಿಯವರೆಗೆ ಈ ಎಲ್ಲಾ ಪೌರ ಕಾರ್ಮಿಕರಿಗೂ ಕಾರ್ಮಿಕ ಕಾಯ್ದೆ ಅನ್ವಯ ಕನಿಷ್ಠ ವೇತನವನ್ನು ಹೆಚ್ಚಿಸಲು ಸರ್ಕಾರವು ಈ ಕುರಿತು ಉನ್ನತ ಮಟ್ಟದ ಅಧಿಕಾರಗಳನ್ನು ಒಳಗೊಂಡಂತೆ ಚರ್ಚಿಸಿ ವರದಿ ನೀಡಲು ತಿಳಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹೆಚ್. ಹನುಮಂತಪ್ಪ ಹಾಗೂ ನವದೆಹಲಿಯ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಜಗದೀಶ್ ಹೀರೇಮಣಿ ಅವರು ಉಪಸ್ಥಿತರಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago