Bengaluru 22°C
Ad

ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಕೊನೆಗೂ ಸಿದ್ಧವಾಗಿದೆ. ರಾಗಿ ಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ಹಳದಿ ಮಾರ್ಗದ (ಆರ್‌ವಿ ರಸ್ತೆ- ಬೊಮ್ಮಸಂದ್ರ) 3.3 ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ.

ಬೆಂಗಳೂರು: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಕೊನೆಗೂ ಸಿದ್ಧವಾಗಿದೆ. ರಾಗಿ ಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ಹಳದಿ ಮಾರ್ಗದ (ಆರ್‌ವಿ ರಸ್ತೆ- ಬೊಮ್ಮಸಂದ್ರ) 3.3 ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ. ಜೂನ್‌ 15ರಂದು ಅಥವಾ ನಂತರ ರಾಗಿಗುಡ್ಡದಿಂದ ಸಿಎಸ್‌ಬಿ ಒಂದು ಬದಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಇದಕ್ಕೂ ಮುನ್ನ ಅಧಿಕಾರಿಗಳು ಅಂತಿಮ ತಪಾಸಣೆ ನಡೆಸಲಿದ್ದಾರೆ. ಕೆಳ ಡೆಕ್ ಅನ್ನು ವಾಹನಗಳ ಸಂಚಾರಕ್ಕೆ ಇದ್ದರೆ, ಮೇಲಿನ ಡೆಕ್ ನಮ್ಮ ಮೆಟ್ರೋಗಾಗಿ ಬಳಕೆ ಮಾಡಲಾಗುತ್ತದೆ.

ಬಿಎಂಆರ್‌ಸಿಎಲ್‌ ಸಿಎಸ್‌ಬಿ ಜಂಕ್ಷನ್‌ನಲ್ಲಿ 5 ಲೂಪ್‌ಗಳು (A,B,C,D ಮತ್ತುE) ಮತ್ತು ರ‍್ಯಾಂಪ್‌ಗಳನ್ನು ನಿರ್ಮಿಸುತ್ತಿದೆ. ಎ,ಬಿ,ಸಿ ಲೂಪ್‌ಗಳು ರಾಗಿಗುಡ್ಡ / ಬಿಟಿಎಂ ಲೇಔಟ್ ಕಡೆಯಿಂದ ಕೆ.ಆರ್.ಪುರಂ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಈಗಾಗಲೇ ಎ,ಬಿ, ಸಿ ರ‍್ಯಾಂಪ್‌ಗಳಲ್ಲಿ ಎಲ್ಲಾ ಕಾರ್ಯಗಳು ಪೂರ್ಣಗೊಂಡಿದ್ದು, ಜೂನ್‌ನಲ್ಲಿ ತೆರೆಯುವ ನಿರೀಕ್ಷೆಯಿದೆ. 2025ರ ಜೂನ್ ವೇಳೆಗೆ ಡಿ ಮತ್ತು ಇ ರ‍್ಯಾಂಪ್‌ಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Ad
Ad
Nk Channel Final 21 09 2023
Ad