News Karnataka Kannada
Friday, May 10 2024
ಬೆಂಗಳೂರು

ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ

ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮೂಲಕ ಬಡವನಗುಡಿ ಕಡಲೆಕಾಯಿ ಪರಿಷೆಗೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಚಾಲನೆ ನೀಡಿದ್ದಾರೆ. ವಿಧಾನ ಪರಿಷತ್ ಜೆಡಿಎಸ್​​ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು.
Photo Credit : News Kannada

ಬೆಂಗಳೂರು: ಇಲ್ಲಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮೂಲಕ ಬಡವನಗುಡಿ ಕಡಲೆಕಾಯಿ ಪರಿಷೆಗೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಚಾಲನೆ ನೀಡಿದ್ದಾರೆ. ವಿಧಾನ ಪರಿಷತ್ ಜೆಡಿಎಸ್​​ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು.

ದೊಡ್ಡಗಣಪನಿಗೆ ವಿಶೇಷ 75 ಕೆಜಿ ಬೆಣ್ಣೆ ಅಲಂಕಾರ ಮಾಡಲಾಗಿದೆ. ನಿನ್ನೆ ಗಣಪನಿಗೆ ಸಾವಿರ ಕೆಜಿ ಕಡಲೆಕಾಯಿಯಿಂದ ಅಭಿಷೇಕ ಮಾಡಲಾಗಿತ್ತು. ಇಂದು ದೊಡ್ಡಬಸವನಿಗೆ 100 ಸೇರು ಕಡಲೆಕಾಯಿ ಅಭಿಷೇಕ ಮಾಡಲಾಗಿದೆ.

ಇಂದಿನಿಂದ 3 ದಿನಗಳ ಕಾಲ ಪರಿಷೆ ನಡೆಯಲಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ’ ಎಂಬ ಆಹ್ವಾನದೊಂದಿಗೆ ಈ ಬಾರಿ ಪರಿಸರ ಸ್ನೇಹಿ ಪರಿಷೆ ನಡೆಸಲಾಗುತ್ತಿದೆ. 65 ವರ್ಷ ಮೇಲ್ಪಟ್ಟವರಿಗೆ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಈ ಬಾರಿ ಒಟ್ಟು ನಾಲ್ಕೈ ದು ಕಡಲೆಕಾಯಿ ತಳಿಗಳು ಪರಿಷೆಯಲ್ಲಿ ವ್ಯಾಪಾರವಾಗ್ತಿದೆ. ನಾಟಿ, ಫಾರಂ, ಬೋಂಡಾ ಹಾಗೂ ಬಾದಾಮಿ ಎಂಬಿತ್ಯಾದಿ ಕಡಲೆಕಾಯಿಗಳು ಪರಿಷೆಯಲ್ಲಿ ಮಾರಾಟ ಆಗ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನ ಬರುವ ಹಿನ್ನೆಲೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು