ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವನ್ನು ಕೇಂದ್ರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಗಲಾಟೆ ಉಂಟಾಗಿದೆ. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಘಟನೆ ಸಂಭವಿಸಿದ ಹಿನ್ನೆಲೆ, ಕಾರಣಗಳು ಹಾಗೂ ಇದಕ್ಕೆ ಹೊಣೆಗಾರರಾದವರು ಯಾರು ಎಂಬುದರ ಬಗ್ಗೆ ವಿವರವಾಗಿ ವಿಚಾರಣೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಸಂಶಯಕ್ಕೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

