ಬೆಂಗಳೂರು: ರೈತ ವಿದ್ಯಾ ನಿಧಿಯ ಮೂಲಕ ರೈತರಿಗೆ ಹೊಸ ಭರವಸೆ, ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಪ್ರಾರಂಭಿಸಲಾದ ‘ರೈತ ವಿದ್ಯಾ ನಿಧಿ’ ವಿದ್ಯಾರ್ಥಿವೇತನ ಯೋಜನೆಯು ಕಳೆದ ವರ್ಷ ರೈತ ಕುಟುಂಬಗಳ ಸುಮಾರು 8.50 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡಿದೆ ಮತ್ತು ಇದು ಈ ವರ್ಷ 9.80 ಲಕ್ಷ ವಿದ್ಯಾರ್ಥಿಗಳನ್ನು ತಲುಪಲಿದೆ. ಈ ಯೋಜನೆಯು ರೈತರ ಜೀವನದಲ್ಲಿ ಹೊಸ ಭರವಸೆಯನ್ನು ತಂದಿದೆ ಮತ್ತು ಅವರ ಮಕ್ಕಳಿಗೆ ಶಿಕ್ಷಣ ನೀಡಲು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಧಿಕಾರ ಸ್ವೀಕರಿಸಿ ಒಂದು ವರ್ಷ ಪೂರೈಸಿದ ಕುರಿತು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಡಿಬಿಟಿ ವ್ಯವಸ್ಥೆಯ ಮೂಲಕ ಪ್ರತಿದಿನ 15-20 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಗುತ್ತಿದೆ. ವಿವಿಧ ವರ್ಗದ ಫಲಾನುಭವಿಗಳಿಗೆ ಮಾಸಿಕ ಪಿಂಚಣಿಯನ್ನು ಹೆಚ್ಚಿಸಲಾಗಿದೆ. ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ಸಮುದಾಯಗಳ ಕಲ್ಯಾಣ ಯೋಜನೆಗಳಿಗೆ ಹೆಚ್ಚುವರಿಯಾಗಿ Rs೮೦೦ ಕೋಟಿ ಅನುದಾನವನ್ನು ಒದಗಿಸಲಾಗಿದೆ.

ಎಸ್ಸಿ, ಎಸ್ಟಿ ಮತ್ತು ಒಬಿಸಿ ಹಾಸ್ಟೆಲ್  ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ಅನುದಾನವನ್ನು ಹೆಚ್ಚಿಸಲಾಗಿದೆ. ರಾಜ್ಯದ ೫ ಪ್ರಮುಖ ನಗರಗಳಲ್ಲಿ ಹೊಸ ದೊಡ್ಡ ಹಾಸ್ಟೆಲ್ ಗಳನ್ನು ನಿರ್ಮಿಸಲಾಗುತ್ತಿದೆ. ಬಡವರಿಗೆ ಮನೆ ನಿರ್ಮಾಣದ ಸಬ್ಸಿಡಿಯನ್ನು 75,000 ರೂ.ಗಳಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಹೊಸ ಮನೆ ಖರೀದಿಸುವವರಿಗೆ ಅನುದಾನವನ್ನು 1.75 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ರಾಜ್ಯವು ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯ ಎಂದು ಅವರು ಹೇಳಿದರು.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

27 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

44 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago