News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಬಿಜೆಪಿಯ ಮತ್ತೊಂದು ವಿಕೆಟ್ ಪತನ

Bengaluru: Another wicket falls for BJP
Photo Credit : News Kannada

ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಇಂದು(ಅಕ್ಟೋಬರ್ 20) ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಗೆ ಸೇರಲಿದ್ದಾರೆ.

ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು. ಅದರಂತೆ ಇದೀಗ ಕಾಂಗ್ರೆಸ್‌ ಸೇರುತ್ತಿದ್ದಾರೆ. ಆದ್ರೆ, ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ ಸಮುದಾಯದ ಹಲವರಿಂದ ವಿರೋಧ ವ್ಯಕ್ತವಾಗಿದೆ.

ಕಾಡುಗೊಲ್ಲ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ಪಡೆಯದೇ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ವಿರೋಧ ವ್ಯಕ್ತವಾಗಿವೆ. ಅಲ್ಲದೇ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲ ವಿರೋಧಿ ಎಂದು ಪೋಸ್ಟ್ ಗಳನ್ನು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಕಾಡುಗೊಲ್ಲ ಸಮುದಾಯದ ನಾಯಕರ ಅಸಮಾಧಾನ ನಡುವೆಯೂ ಪೂರ್ಣಿಮಾ ಕಾಂಗ್ರೆಸ್ ಸೇರುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು