News Karnataka Kannada
Saturday, May 04 2024
ಬೆಂಗಳೂರು

ಬೆಂಗಳೂರು: ನಾಳೆ (ಜೂ.18)ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

Griha Jyothi, Annabhagya officially launched today
Photo Credit : Facebook

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಪ್ರಸ್ತುತ ಸಮಸ್ಯೆ ಪರಿಹಾರವಾಗಿದ್ದು, ಜೂ.18ರಿಂದ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ.

ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. https://sevasindhugss.karnataka.gov.in ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು