News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: ಬಿಲ್‌ ಕಟ್ಟದಿದ್ದಲ್ಲಿ ವಿದ್ಯುತ್‌ ಸಂಪರ್ಕ ಕಟ್‌ – ಬೆಸ್ಕಾಂ ಎಚ್ಚರಿಕೆ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಪರಿಷ್ಕರಣೆ ಮಾಡಿದ್ದು, ಇಂದಿನಿಂದ ನೂತನ 100 ಯುನಿಟ್ ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಯುನಿಟ್ ಗೆ 1ರೂ 10 ಪೈಸೆ ಕಡಿತ ಮಾಡುವುದಾಗಿ ತಿಳಿಸಿದಿದೆ.
Photo Credit : News Kannada

ಬೆಂಗಳೂರು: ರಾಜ್ಯ ಸರಕಾರ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಿಸಿದೆ ಎಂದು ಹಲವರು ಬಿಲ್‌ ಪಾವತಿಸಲು ನಿರಾಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ. ಇಲ್ಲದಿದ್ದರೆ ನೀತಿ ನಿರ್ಧಾರದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

200 ಯೂನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಇಲ್ಲದಿರುವುದರಿಂದ ನಮ್ಮ ಬಳಿ ಉತ್ತರವಿಲ್ಲ. ಸರ್ಕಾರದ ಆದೇಶದ ಅನುಪಸ್ಥಿತಿಯಲ್ಲಿ, ಬಿಲ್ ಪಾವತಿಸಲು ನಿರಾಕರಿಸುವವರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ಬೆಸ್ಕಾಂಗೆ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ಅಧಿಕಾರಿ ಹೇಳಿದರು. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಮಗೆ ಹೇಳಿದ್ದಾರೆ. ಆದರೆ, ಇದನ್ನು ನಾವು ಗ್ರಾಹಕರಿಗೆ ಹೇಳಲು ಸಾಧ್ಯವಿಲ್ಲ. ಅವರ ಬಿಲ್‌ಗಳನ್ನು ಕಟ್ಟುವಂತೆ ನಾವು ಕೇಳುತ್ತಿದ್ದೇವೆ. ಜನರ ಕಾಳಜಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೆ ನಾವು ಅಸಹಾಯಕರಾಗಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು