ಬೆಂಗಳೂರು

ಬೆಂಗಳೂರು: ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್‌ ರಾಜೀನಾಮೆ

ಬೆಂಗಳೂರು: ಚೆನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸಿದ್ದಾರೆ. ಕೆಎಸ್‌ಡಿಎಲ್‌ ಸಂಸ್ಥೆಗೆ ರಾಸಾಯನಿಕ ಪೂರೈಕೆ ಸಂಬಂಧಿಸಿ ಗುತ್ತಿಗೆದಾರರದಿಂದ ಲಂಚ ಸ್ವೀಕರಿಸುವ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷ ಅವರ ಪುತ್ರ ಪ್ರಶಾಂತ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ 40 ಲಕ್ಷ ರೂ.ಗಳನ್ನು ವಶಪಡಿಸಿಕೊಂಡ ಪ್ರಕರಣ ಹಿನ್ನಲೆಯಲ್ಲಿ ಸಿಎಂ ಸೂಚನೆಯಂತೆ ಮಾಡಾಳ್‌ ರಾಜೀನಾಮೆ ನೀಡಿದ್ದಾರೆ.

ಇನ್ನು ಶಾಸಕರು ರಾಜೀನಾಮೆ ಪತ್ರದಲ್ಲಿ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎಂದು ವಿವರಿಸಿದ್ದಾರೆ. ಸರ್ಕಾರದ ಮೇಲೆ ಮುಜುಗರ ಆಗಬಾರದು ಎಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಹುಟ್ಟೂರಲ್ಲಿಯೂ ದಾಳಿ: ದಾವಣಗೆರೆ ಜಿಲ್ಲೆಯ ಶಾಸಕರ ಹುಟ್ಟೂರು ಚನ್ನೇಶಪುರದ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಕೌಲಾಪುರೆ ದಾಳಿ ನೇತೃತ್ವ ವಹಿಸಿದ್ದರು.

Ashika S

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

14 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

41 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

50 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago